Entertainment

ಕರ್ನಾಟಕದ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ..? ಕೋಟಿ ಕೋಟಿ ಇದ್ದರೂ ಸರಳವಾಗಿ, ಸಮಾಜಮುಖಿ ಜೀವನ ನಡೆಸುತ್ತಿದ್ದ ಪುನೀತ್..!!!

ಪವರಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಾಯಕನಟ. ಅಭಿಮಾನಿಗಳಿಂದ ಅಪ್ಪು ಎಂದೇ ಕರೆಯಿಸಿಕೊಳ್ಳುವ ಪುನೀತ್ ನಟನೆಯಲ್ಲದೇ ಹಿನ್ನಲೆ ಗಾಯಕರಾಗಿ ,ನಿರ್ಮಾಪಕರಾಗಿಯೂ ಪ್ರಸ್ತುತರು. ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಮತ್ತು ನಾಯಕನಾಗಿ 25 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

 

 

1975, ಮಾರ್ಚ್ 17 ರಂದು ಚೆನ್ನೈನ ಕಲ್ಯಾಣಿ ಆಸ್ಪತ್ರೆಯಲ್ಲಿ ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಜನಿಸಿದರು.ಇವರ ಹಿರಿಯ ಸಹೋದರರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕೂಡ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು. ಇವರು ರಾಜ್ ದಂಪತಿಗಳ ಕಿರಿಯ ಮಗುವಾಗಿದ್ದರಿಂದ ಬಹು ಅಕ್ಕರೆಯಲ್ಲಿ ಬೆಳೆದರು. ಪುನೀತ್ ಮತ್ತು ಸಹೋದರಿ ಪೂರ್ಣಿಮಾರನ್ನು,ರಾಜ್ ತಮ್ಮ ಬಹುತೇಕ ಚಿತ್ರಗಳ ಶೂಟಿಂಗ್‌ಗೆ ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದರು.

 

 

ಹೀಗಾಗಿ ಬಾಲ್ಯದಿಂದಲೇ ಕಲೆಯ ಜೊತೆಗಿನ ನಂಟು ಆರಂಭವಾಯಿತು. ಪುನೀತ್ ಆರು ತಿಂಗಳು ಮಗುವಿದ್ದಾಗ 1976 ರಲ್ಲಿ ತೆರೆಕಂಡ `ಪ್ರೇಮದ ಕಾಣಿಕೆ’ ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡರು. ನಂತರ ಬಂದ `ಸನಾದಿ ಅಪ್ಪಣ್ಣ’,`ತಾಯಿಗೆ ತಕ್ಕ ಮಗ’,`ವಸಂತ ಗೀತ’,`ಭೂಮಿಗೆ ಬಂದ ಭಗವಂತ’,`ಭಾಗ್ಯವಂತರು’ ಮುಂತಾದ ಚಿತ್ರಗಳಲ್ಲಿ ನಟಿಸಿ ತಮ್ಮ ಅಭಿನಯ ಪ್ರೌಡಿಮೆ ಮೆರೆದರು.

 

 

ಭಾಗ್ಯವಂತ ಚಿತ್ರದ `ಬಾನ ದಾರಿಯಲ್ಲಿ ಸೂರ್ಯ’, ಚಲಿಸುವ ಮೋಡಗಳು ಚಿತ್ರದ `ಕಾಣದಂತೆ ಮಾಯವಾದನೋ’,ಯಾರಿವನು ಚಿತ್ರದ `ಕಣ್ಣಿಗೆ ಕಾಣುವ ದೇವರು’ ಮುಂತಾದ ಗೀತೆಗಳನ್ನು ಹಾಡಿ ಹಿನ್ನೆಲೆ ಗಾಯಕರಾಗಿಯೂ ಪ್ರಶಂಸೆ ಪಡೆದರು. `ಚಲಿಸುವ ಮೋಡಗಳು’ ಮತ್ತು `ಎರಡು ನಕ್ಷತ್ರಗಳು’ ಚಿತ್ರದ ಅಭಿನಯಕ್ಕಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದರು.

 

 

ಬಾಲಕಲಾವಿದನಾಗಿ ಪುನೀತ್ ಅಭಿನಯಿಸಿದ ಉತ್ಕೃಷ್ಟ ಚಿತ್ರ `ಬೆಟ್ಟದ ಹೂ’. 1984 ರಲ್ಲಿ ತೆರೆಕಂಡ ಎನ್ ಲಕ್ಷ್ಮಿ ನಾರಾಯಣ ನಿರ್ದೇಶನದ ಈ ಚಿತ್ರದಲ್ಲಿ ಪುನೀತ್ ಬಾಲಕ ರಾಮು ಆಗಿ ನಟಿಸಿದರು. ಶಾಲೆಗೆ ಹೋಗುವ ಬಡ ಬಾಲಕನೊಬ್ಬನ ತಳಮಳಗಳನ್ನು ಚಿತ್ರ ಚೆನ್ನಾಗಿ ಬಿಂಬಿಸಿತು. ಈ ಚಿತ್ರ ಇಂಗ್ಲೀಷ್ ಕಾದಂಬರಿ `ವಾಟ್ ದೆನ್ ರಾಮನ್’ ಆಧಾರಿತವಾಗಿತ್ತು. ಈ ಚಿತ್ರದ ಅಭಿನಯಕ್ಕಾಗಿ ಪುನೀತ್‌ಗೆ ರಾಷ್ಟ್ರ ಪ್ರಶಸ್ತಿ ದೊರೆಯಿತು.

 

 

2002 ರಲ್ಲಿ ತೆರೆಕಂಡ ಪುರಿ ಜಗನ್ನಾಥ ನಿರ್ದೇಶನದ `ಅಪ್ಪು’ ಚಿತ್ರದಿಂದ ನಾಯಕನಟನಾಗಿ ಕನ್ನಡ ಚಿತ್ರರಂಗದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದರು. ಈ ಚಿತ್ರ ಅದ್ಧೂರಿ ಯಶಸ್ಸು ಕಂಡಿತು. ನಂತರ ತೆರೆಗೆ ಬಂದ ಅಭಿ,ವೀರ ಕನ್ನಡಿಗ,ಮೌರ್ಯ,ಆಕಾಶ್ ,ನಮ್ಮ ಬಸವ, ಅಜಯ್ ಮುಂತಾದ ಚಿತ್ರಗಳು ಬಾಕ್ಸಾಫೀಸಿನಲ್ಲಿ ಒಳ್ಳೆ ದಾಖಲೆ ಮಾಡಿ ಅದ್ದೂರಿ ಪ್ರದರ್ಶನ ಕಂಡವು. ಇವರು ನಾಯಕನಾಗಿ ನಟಿಸಿದ ಮೊದಲ ಹತ್ತು ಚಿತ್ರಗಳು ಶತದಿನ ಪೂರೈಸಿದ್ದು ದಾಖಲೆ.ನಾಯಕನಾಗಿ ಎರಡು ರಾಜ್ಯ ಪ್ರಶಸ್ತಿ, ನಾಲ್ಕು ಫಿಲ್ಮಫೇರ್,ಎರಡು ಸೈಮಾ ಹೀಗೆ ಹತ್ತು ಹಲವು ಪ್ರಶಸ್ತಿ ಪಡೆದಿದ್ದಾರೆ.

 

 

ಗಾಯಕನಾಗಿ ಸುಮಾರು ಐವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಡಿರುವ ಪುನೀತ್, ಗಾಯನದಿಂದ ಬರುವ ಸಂಪೂರ್ಣ ಹಣವನ್ನು ಸಮಾಜಸೇವೆಗೆ ವಿನಿಯೋಗಿಸುತ್ತಾರೆ.ಕಿರುತೆರೆಯಲ್ಲಿ ನಿರೂಪಕರಾಗಿ ಕನ್ನಡದ ಕೋಟ್ಯಾಧಿಪತಿಯ ಎರಡು ಸೀಸನ್‌ಗಳನ್ನು ಮತ್ತು ಫ್ಯಾಮಿಲಿ ಪವರ್ ಎಂಬ ರಿಯಾಲಿಟಿ ಶೋಗಳನ್ನು ನಿರೂಪಿಸಿದ್ದಾರೆ. ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮದ ಮೊಟ್ಟಮೊದಲ ಅತಿಥಿಯಾಗಿ ಭಾಗವಹಿಸಿದ್ದು ವಿಶೇಷ.

 

 

ಚಿತ್ರ ನಿರ್ಮಾಪಕರಾಗಿ `ಕವಲುದಾರಿ’, `ಮಾಯಾಬಜಾರ್’ ಎಂಬ ಚಿತ್ರಗಳನ್ನು ತಮ್ಮ ಹೋಮ್ ಬ್ಯಾನರ್‌ನಲ್ಲಿಯೇ ನಿರ್ಮಸಿರುವ ಪುನೀತ್ ತಮ್ಮ ಪ್ರೋಡಕ್ಸನ್ ಹೌಸ್ ಮೂಲಕ ಕಿರುತೆರೆ ಧಾರಾವಾಹಿ ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ `ಪಿ.ಅರ್.ಕೆ ‘ ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ. ಇದಲ್ಲದೆ ಅಮೇಜಾನ್ ಪ್ರೈಮ್ ಸಹಭಾಗಿತ್ವದಲ್ಲಿ ಫ್ರೆಂಚ್ ಬಿರಿಯಾನಿ, ಲಾ ಎಂಬ ಚಿತ್ರಗಳನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಿದ್ದಾರೆ.

 

 

ಮೈಸೂರಿನ ಶಕ್ತಿ ಧಾಮ ಆಶ್ರಮದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿರುವ ಪುನೀತ್ `ಬೆಂಗಳೂರು ಪ್ರೀಮೀಯರ್ ಪುಟ್‌ಬಾಲ್ ತಂಡದ ಒಡೆತನವನ್ನು ಹೊಂದಿದ್ದಾರೆ. ಕರ್ನಾಟಕ ಸರ್ಕಾರದ ನಂದಿನಿ ಹಾಲು ಉತ್ಪನ್ನಗಳು ಮತ್ತು LED ಬಲ್ಬ್‌ಗಳ ರಾಯಭಾರಿಯಾಗಿ ಕೂಡ ಪ್ರಸ್ತುತರು. ಒಂದು ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಭಾರಿಯಾಗಿದ್ದರು. 1999 ರಲ್ಲಿ ಚಿಕ್ಕಮಗಳೂರಿನವರಾದ ಅಶ್ವಿನಿಯವರನ್ನು ಕೈಹಿಡಿದರು.ಈ ದಂಪತಿಗಳಿಗೆ ಧೃತಿ ಮತ್ತು ವಂದಿತಾ ಎಂಬ ಪುತ್ರಿಯರಿದ್ದಾರೆ.

 

 

2021 ಆಕ್ಟೋಬರ್ 29 ರ ಬೆಳಿಗ್ಗೆ ಜಿಮ್ ಮಾಡುವಾಗ ಲಘು ಹೃದಯಾಘಾತದಿಂದ ಕುಸಿದು ಬಿದ್ದ ಪುನೀತ್, ಹತ್ತಿರದ ರಮಣಶ್ರೀ ಆಸ್ಪತ್ರೆಗೆ ದಾಖಲಾದರು. ತುರ್ತು ಚಿಕಿತ್ಸೆಯ ನಂತರ ಪುನೀತ್ ರನ್ನು ವಿಕ್ರಮ್ ಆಸ್ಪತ್ರೆಯ ತೀವ್ರ ನಿಘಾ ಘಟಕಕ್ಕೆ ದಾಖಲಾಯಿಸಿತು. ಚಿಕಿತ್ಸೆ ಫಲಕಾರಿಯಾಗದೇ 11.45 ಘಂಟೆಯ ಸುಮಾರಿಗೆ ನಿಧನರಾದರು. ಕನ್ನಡ ಚಿತ್ರರಂಗದ ಟಾಪ್ ನಟನೊಬ್ಬ ತನ್ನ ಜೀವನ ಮತ್ತು ಸಿನಿ ಜೀವನದ ಉತ್ತುಂಗುದ ಕಾಲದಲ್ಲಿಯೇ ನಿಧನವಾಗಿದ್ದು ಕನ್ನಡ ಚಿತ್ರರಂಗದ ಪಾಲಿಗೆ ದುರ್ದೈವವೇ ಸರಿ.

 

 

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ. ಕರ್ನಾಟಕದ ರಾಜರತ್ನರಾಗಿದ್ದ, ಸರಳ ಸಜ್ಜನಿಕೆಯ ಪುನೀತ್ ರಾಜಕುಮಾರ್ ಸಣ್ಣ ವಯಸ್ಸಿನಲ್ಲಿ ಸಂಪಾದನೆ ಮಾಡಿ ಗಳಿಕೆಯ ಸಮಯದಲ್ಲಿ ದಾನ ಮಾಡಿ ಇದೀಗ ನಮ್ಮಿಂದ ಮಾಯವಾಗಿದ್ದಾರೆ. ಸಿನಿಮಾಗಳಲ್ಲಿ ಕೋಟಿ ಕೋಟಿ ಸಂಭಾವನೆ ಪಡೆಯುವ ಪುನೀತ್ ಒಂದು ಖಾಸಗಿ ಕಾರ್ಯಕ್ರಮದ ಎಪಿಸೋಡಿಗೆ ಬರೋಬ್ಬರಿ ಒಂದು ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ.

 

 

ಇನ್ನು ಯುವಜನತೆಗೆ ಪ್ರೇರೇಪಣೆ ಮಾಡಲು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಪುನೀತ್ ರಾಜಕುಮಾರ್ ಅವರನ್ನು ಇನ್ವೈಟ್ ಮಾಡಿದಾಗ ಇಲ್ಲ ಎನ್ನದೆ ಸದಾ ಬಂದು ಯುವಕರಿಗೆ ಪ್ರೇರಣೆಯ ಮಾರ್ಗವನ್ನು ತೋರಿಸುತ್ತಿದ್ದರು. ಸಿನಿಮಾಗಳಲ್ಲಿ ಕೋಟಿ ಕೋಟಿ ಸಂಭಾವನೆ ಪಡೆಯುವ ಪುನೀತ್ ರಾಜಕುಮಾರ್ ಅವರ ಒಟ್ಟು ಆಸ್ತಿ ಎಷ್ಟಿದೆ ಎನ್ನುವುದು ಪುನೀತ್ ನಿಧನದ ವೇಳೆ ಚರ್ಚೆಗೆ ಬಂದಿದೆ. ಒಂದು ಖಾಸಗಿ ಕಾರ್ಯಕ್ರಮದ ಎಪಿಸೋಡಿಗೆ ಬರೋಬ್ಬರಿ ಒಂದು ಕೋಟಿ ಸಂಭಾವನೆ ಪುನೀತ್ ಪಡೆಯುತ್ತಾರೆ.

 

 

ಪುನೀತ್ ತನ್ನ ಆದಾಯದಲ್ಲಿ ಕೋಟಿ-ಕೋಟಿ ರೂಪಾಯಿ ಹಣವನ್ನು ತಮ್ಮ ವೃದ್ಧಾಶ್ರಮ, ಅನಾಥಾಶ್ರಮಕ್ಕೆ ಮೀಸಲಿಟ್ಟಿದ್ದಾರೆ. ಇನ್ನು ಮೊನ್ನೆಯಷ್ಟೇ ಪುನೀತ್ ರಾಜಕುಮಾರ್ ಆಡಿ ಕಾರೊಂದನ್ನು ಖರೀದಿಸಿದ್ದು, ಬರೋಬ್ಬರಿ ನಾಲ್ಕರಿಂದ ಐದು ದುಬಾರಿ ಮಾಡೆಲ್ ಕಾರುಗಳು ಅವರ ಬಳಿಯಿದೆ. ಪುನೀತ್ ರಾಜಕುಮಾರ್ ತನ್ನ ಸುಂದರ ಕುಟುಂಬಕ್ಕಾಗಿ ಐಶಾರಾಮಿ ಬಂಗಲೆಯೊಂದನ್ನು ಕೂಡ ಬಗ್ ಖರೀದಿಸಿದ್ದರು. ಇವೆಲ್ಲವೂ ಸೇರಿ ಬರೋಬ್ಬರಿ 500 ರಿಂದ 600 ಕೋಟಿ ಆಸ್ತಿಯನ್ನು ಪುನೀತ್ ಹೊಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Related Articles

Leave a Reply

Your email address will not be published. Required fields are marked *

Back to top button