Entertainment

ಪುನೀತ್ ಮಕ್ಕಳು ಧೃತಿ, ವಂದಿತಾ ಬಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತೆಗೆದುಕೊಂಡ ದಿಟ್ಟ ನಿರ್ಧಾರ ಎಂತದ್ದು ಗೊತ್ತಾ..? ತಿಳಿದರೆ ಅಚ್ಚರಿ ಪಡುತ್ತೀರಿ..!!!

ವಿಧಿಯಾಟವನ್ನು ಯಾರಿಂದಲೂ ತಿಳಿಯಲು ಸಾಧ್ಯವೆ ಇಲ್ಲ ಎನ್ನುವುದಕ್ಕೆ ಪುನೀತ್ ರಾಜಕುಮಾರ್ ಅವರ ಸಾವು ನಿದರ್ಶನವಾಗಿದೆ. ಅಕ್ಟೋಬರ್ 29ರಂದು ಹೃದಯಾಘಾತದಿಂದ ಪುನೀತ್ ರಾಜಕುಮಾರ್ ಅವರು ನಿಧನರಾಗಿದ್ದು ಅಂತ್ಯಸಂಸ್ಕಾರ ನಡೆದ ನಂತರ ಪುನೀತ್ ಅವರ ಪತ್ನಿ ಹಾಗೂ ಪುತ್ರಿಯರು ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅಕ್ಟೋಬರ್ 29ರಂದು ಹೃದಯಾಘಾತದಿಂದ ಸಾವನ್ನಪ್ಪಿದ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರವನ್ನು ಅಕ್ಟೋಬರ್ 31 ಭಾನುವಾರ ಬೆಳಗ್ಗೆ ಕಂಠೀರವ ಸ್ಟುಡಿಯೊ ಆವರಣದಲ್ಲಿ ಡಾಕ್ಟರ್ ರಾಜಕುಮಾರ್ ಹಾಗೂ ಪಾರ್ವತಮ್ಮ ರಾಜಕುಮಾರ್ ಅವರ ಸಮಾಧಿಯ ಪಕ್ಕದಲ್ಲಿ ಈಡಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಯಿತು.

 

 

ಕಂಠೀರವ ಸ್ಟುಡಿಯೋದಲ್ಲಿ ರಾಜಕುಮಾರ್ ಅವರ ಬಂಧುಗಳು ಗಣ್ಯರು ಭಾಗಿಯಾಗಿದ್ದರು. ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಪಡೆಯಲು 25 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಆಗಮಿಸಿದ್ದರು. ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿವಿಧಾನಗಳನ್ನು ಪುನೀತ್ ರಾಜಕುಮಾರ್ ಅವರ ಸಹೋದರ ರಾಘವೇಂದ್ರ ರಾಜಕುಮಾರ್ ಅವರ ಪುತ್ರ ವಿನಯ್ ಅವರು ನೆರವೇರಿಸಿದರು. ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಹಾಗೂ ಪುತ್ರಿಯರಾದ ವಂದನಾ ಮತ್ತು ಧೃತಿ ಒಬ್ಬರಿಗೊಬ್ಬರು ಕೈಹಿಡಿದುಕೊಂಡು ಕಣ್ಣೀರು ಹಾಕುತ್ತಿದ್ದರು.

 

 

ಮತ್ತೊಂದು ಕಡೆ ಪುನೀತ್ ರಾಜಕುಮಾರ್ ಅವರ ಸಹೋದರ ಶಿವರಾಜ್ ಕುಮಾರ್ ಅವರ ದುಃಖವನ್ನು ನೋಡಲು ಸಾಧ್ಯವಾಗುತ್ತಿರಲಿಲ್ಲ. ಪೊಲೀಸ್ ಬ್ಯಾಂಡ್ ರಾಷ್ಟ್ರಗೀತೆ ನುಡಿಸಿ ಸಕಲ ಸರ್ಕಾರಿ ಗೌರವದೊಂದಿಗೆ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಈ ಕಾರ್ಯಕ್ಕೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಿ ಪುನೀತ್ ಅವರ ಪತ್ನಿ ಅಶ್ವಿನಿ ಹಾಗೂ ಪುತ್ರಿಯರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಇಷ್ಟು ದಿನ ನಗುನಗುತ್ತಾ ಅನೇಕರಿಗೆ ಸಹಾಯ ಮಾಡಿದಂತಹ ಪುನೀತ್ ಅವರು ಇನ್ನಿಲ್ಲ ಎಂಬ ಸತ್ಯವನ್ನು ಅಭಿಮಾನಿಗಳಾದ ನಮಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ ಹೀಗಿರುವಾಗ ಅವರ ಪತ್ನಿ ಹಾಗೂ ಪುತ್ರಿಯರು ಬಹಳ ನೋವನ್ನು ಅನುಭವಿಸುತ್ತಿದ್ದಾರೆ.

 

 

ಇಂತಹ ದುಃಖದ ಸಮಯದಲ್ಲಿ ಅಶ್ವಿನಿ ಹಾಗೂ ಪುನೀತ್ ಅವರ ಮಕ್ಕಳು ಪುನೀತ್ ರಾಜಕುಮಾರ್ ಅವರು ನಡೆಸುತ್ತಿದ್ದ ಉದ್ಯಮಗಳನ್ನು ಯಾವುದೆ ತೊಂದರೆ ಇಲ್ಲದೆ ಮುಂದುವರಿಸಿಕೊಂಡು ಹೋಗುವ ನಿರ್ಧಾರವನ್ನು ಮಾಡಿದ್ದಾರೆ. ಇಂತಹ ದುಃಖದ ಸಮಯದಲ್ಲಿ ಅವರು ದಿಟ್ಟತನದ ನಿರ್ಧಾರ ಮಾಡಿರುವುದು ಶ್ಲಾಘನೀಯವಾಗಿದೆ. ಹೊಸಬರಿಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿ ಕಲಾವಿದರು ಮುಂದೆ ಬರಲಿ ಎಂಬ ಉದ್ದೇಶದಿಂದ ಪುನೀತ್ ರಾಜಕುಮಾರ್ ಅವರು ಪ್ರಾರಂಭಿಸಿದ ಪಿಆರ್ ಕೆ ಪ್ರೊಡಕ್ಷನ್ ಅನ್ನು ಪತ್ನಿ ಅಶ್ವಿನಿ ಹಾಗೂ ಪುತ್ರಿಯರು ಮುಂದುವರಿಸಿಕೊಂಡು ಹೋಗುತ್ತಾರೆ ಎಂದು ತಿಳಿದುಬಂದಿದೆ.

 

 

ಪುನೀತ್ ರಾಜಕುಮಾರ್ ಅವರು ಪ್ರಾರಂಭಿಸಿದ ಯಾವುದೆ ಉದ್ಯಮ ನಿಲ್ಲಬಾರದು ಎಂದು ನಿರ್ಧಾರ ಮಾಡಿರುವುದು ಅಭಿಮಾನಿಗಳಿಗೆ ಸಂತಸ ನೀಡಿದೆ. ಪುನೀತ್ ರಾಜಕುಮಾರ್ ಅವರು ನಮ್ಮೊಂದಿಗೆ ಇಲ್ಲದೆ ಇರಬಹುದು ಆದರೆ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ. ಪುನೀತ್ ಅವರ ಪತ್ನಿ ಹಾಗೂ ಪುತ್ರಿಯರು ತೆಗೆದುಕೊಂಡ ನಿರ್ಧಾರಕ್ಕೆ ನಾವೆಲ್ಲರೂ ಬೆಂಬಲ ನೀಡೋಣ. ದೊಡ್ಡಪ್ಪ ಶಿವರಾಜ್ ಕುಮಾರ್ ಅವರು ಧೃತಿ ಹಾಗೂ ವಂದಿತಾ ಅವರ ಮುಂದಿನ ಭವಿಷ್ಯ, ಜೀವನದ ಬಗ್ಗೆ ಕೆಲವು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಹೆಣ್ಣು ಮಕ್ಕಳ ವಿದ್ಯಾಭ್ಯಾಸ, ಮದುವೆಯ ಬಗ್ಗೆ ತಾವೇ ಕಾಳಜಿ ವಹಿಸಿ ದೊಡ್ಡವರಾಗಿ ತಾವೇ ಇವೆಲ್ಲವನ್ನು ನಿಭಾಯಿಸಿಲಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button